ದೀಪಾವಳಿ ಹಬ್ಬಕ್ಕೆ ಕೇಂದ್ರದಿಂದ ಗಿಫ್ಟ್; ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
Published
0
ಪೆಟ್ರೋಲ್, ಡೀಸೆಲ್ ಮೇಲೆ ಅಬಕಾರಿ ಸುಂಕ ಕಡಿತಗೊಳಿಸುವ ಮೂಲಕ ಕೇಂದ್ರ ಸರ್ಕಾರ ದೇಶದ ಜನತೆಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಿದೆ.
ಇಂದು ಮಧ್ಯರಾತ್ರಿಯಿಂದಲೇ ನೂತನ ಪೆಟ್ರೋಲ್, ಡೀಸೆಲ್ ದರ ಜಾರಿಗೆ ಬರಲಿದ್ದು, ಪೆಟ್ರೋಲ್ ಮೇಲೆ 5 ರೂ. ಹಾಗೂ ಡೀಸೆಲ್ ಮೇಲೆ 10 ರೂ ಅಬಕಾರಿ ಸುಂಕ ಕಡಿತಗೊಳಿಸಿದೆ.
ಎಎನ್‌ಐ ಈ ಬಗ್ಗೆ ವರದಿ ಮಾಡಿದ್ದು, ‘ಭಾರತ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತವನ್ನ ಘೋಷಿಸಿದೆ. ನಾಳೆಯಿಂದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನ ಕ್ರಮವಾಗಿ 5 ಮತ್ತು 10 ರೂ.ಗಳಷ್ಟು ಕಡಿಮೆ ಮಾಡಲಾಗುವುದು’ ಎಂದು ಹೇಳಲಾಗಿದೆ.