ಮಣಿಪುರ: ಚುರಚಂದಾಪುರದಲ್ಲಿ ಉಗ್ರರು ದಾಳಿ ನಡೆಸಿದ್ದು, ಈ ವೇಳೆ 7 ಯೋಧರು ಹುತಾತ್ಮರಾಗಿದ್ದಾರೆ. ಹಲವು ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸೇನಾ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ 7 ಯೋಧರು ಹುತಾತ್ಮರಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಕರ್ನಲ್ ವಿಪ್ಲಪ್ ತ್ರಿಪಾಠಿ ಮತ್ತು ಇತರ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಗೂ ಕರ್ನಲ್ ಅವರ ಪತ್ನಿ, ಮಗ ಮತ್ತು ಚಾಲಕ ಕೂಡ ಗಾಯಗೊಂಡಿದ್ದಾರೆ ಎನ್ನಲಾಗಿದೆ.
Advertisement. Scroll to continue reading.
ಉಗ್ರರ ವಿರುದ್ಧ ಪ್ರತಿ ದಾಳಿಯನ್ನು ಸೇನೆ ನಡೆಸಿದ್ದು ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.