ಬ್ರಹ್ಮಾವರ : ಪೇತ್ರಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ
Published
0
ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ: ಪೇತ್ರಿ ಅಂಗನವಾಡಿ ಕೇಂದ್ರದಲ್ಲಿ ಭಾನುವಾರ ಮಕ್ಕಳ ದಿನಾಚರಣೆ ಜರುಗಿತು. ಚೇರ್ಕಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ರೇಖಾ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮಂಡಳಿ ಪೇತ್ರಿ ಇವರಿಂದ ಮಕ್ಕಳಿಗೆ ಬಹುಮಾನ ಮತ್ತು ಸಿಹಿತಿಂಡಿಯನ್ನು ವಿತರಿಸಲಾಯಿತು.
ಪೇತ್ರಿ ಆರೋಗ್ಯ ಕೇಂದ್ರದ ಕಾರ್ಯಕರ್ತೆ ಪ್ರಮೀಳಾ, ಅಂಗನವಾಡಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಆಶಾಲತಾ, ಮಹಿಳಾಮಂಡಳಿ ಅಧ್ಯಕ್ಷೆ ಪ್ರಸನ್ನ ಪ್ರಸಾದ್ ಭಟ್, ಸದಸ್ಯರಾದ ಆಶಾ ಪಾಟೀಲ್, ಮಲ್ಲಿಕಾ ಹರೀಶ್ ಶೆಟ್ಟಿ , ವನಿತಾ ಶೆಟ್ಟಿ ಮತ್ತು ಸ್ತ್ರೀ ಶಕ್ತಿ ಸಂಘದ ಸದಸ್ಯರು ಮಕ್ಕಳ ಪೋಷಕರು ಆಗಮಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ನಯನ ಸ್ವಾಗತಿಸಿ, ವಂದಿಸಿದರು.