ವರದಿ : ದಿನೇಶ್ ರಾಯಪ್ಪನಮಠ
ಕೋಟ: ರೋಟರಿ ಕ್ಲಬ್ ಕೋಟ, ಸಾಲಿಗ್ರಾಮ, ಇನ್ನರ್ವೀಲ್ ಕೋಟ, ಸಾಲಿಗ್ರಾಮ ಮತ್ತು ಸಮುದಾಯ ಆರೋಗ್ಯ ಕೇಂದ್ರ ಕೋಟ ಇವರ ಸಂಯುಕ್ತ ಆಶ್ರಯದಲ್ಲಿ ಮಣೂರು ಶ್ರೀ ಮಹಾಲಿಂಗೇಶ್ವರ ಕಲ್ಯಾಣ ಮಂಟಪ ಇಲಿಜ್ವರ ಮತ್ತು ರಾಷ್ಟ್ರೀಯ ರೇಬಿಸ್ ಕಾರ್ಯಕ್ರಮದ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು.
ಇನ್ನರ್ವೀಲ್ ಕೋಟ ಸಾಲಿಗ್ರಾಮದ ಅಧ್ಯಕ್ಷ ಶ್ಯಾಮಲಾ ಕುಂದರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಕಾರ್ಯದರ್ಶಿ ನರಸಿಂಹ ಪ್ರಭು ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಕೋಟ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿಶ್ವನಾಥ್ ಇಲಿ ಜ್ವರ ಮತ್ತು ನಿಯಂತ್ರಣ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಅಂಗನವಾಡಿ ಮೇಲ್ವಿಚಾರಕಿ ಮೀನಾಕ್ಷಿ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಇನ್ನರ್ವೀಲ್ ಕ್ಲಬ್ ಕೋಟ ಸಾಲಿಗ್ರಾಮ ಪದಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಗುಂಪಿನ ಸದಸ್ಯರು, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹಿರಿಯ ಆರೋಗ್ಯ ಕಾರ್ಯಕರ್ತ ದೇವಪ್ಪ ಪಟ್ಟೆಗಾರ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಆರೋಗ್ಯ ಸಹಾಯಕ ಹರಿಶ್ಚಂದ್ರ ನಾಯಕ್ ವಂದನಾರ್ಪಣೆ ಗೈದರು.
ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಸಂಬಂಧಿಸಿದ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. ಕರಪತ್ರವನ್ನು ಆಶಾ ಕಾರ್ಯಕರ್ತೆಯರ ಮೂಲಕ ಮನೆಮನೆಗೆ ತಲುಪಿಸಲು ಕ್ರಮ ಕೈಗೊಳ್ಳಲಾಯಿತು.



































