Connect with us

Hi, what are you looking for?

Diksoochi News

ಸಿನಿಮಾ

ನಟ ದುನಿಯಾ ವಿಜಯ್ ತಂದೆ ವಿಧಿವಶ

0

ಬೆಂಗಳೂರು: ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ, ಇಂದು ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನಟ ದುನಿಯಾ ವಿಜಯ್ ತಂದೆ ರುದ್ರಪ್ಪ ಅವರು, ಇಂದು ಬೆಳಿಗ್ಗೆ 7.30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

Advertisement. Scroll to continue reading.

ಮೃತ ನಟ ದುನಿಯಾ ವಿಜಯ್ ತಂದೆ ರುದ್ರಪ್ಪ ಅವರ ಅಂತ್ಯಕ್ರಿಯೆಯನ್ನು ಆನೇಕಲ್ ತಾಲೂಕಿನ ಕುಂಬಾರಹಳ್ಳಿಯಲ್ಲಿ ನಡೆಸಲಾಗುತ್ತಿದೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದುನಿಯಾ ವಿಜಿ ಹಾಕಿಕೊಂಡಿದ್ದು, ತಂದೆ – ತಾಯಿ ಫೋಟೋದೊಂದಿಗೆ ಮಿಸ್ ಯೂ ಅಪ್ಪಾ ಎಂದು ಬರೆದುಕೊಂಡಿದ್ದಾರೆ.

ಅಂದಹಾಗೇ, ಕಳೆದ ಜುಲೈನಲ್ಲಿ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ನಿಧನರಾಗಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!