ಬೆಂಗಳೂರು : ಭೀಕರ ಅಪಘಾತ ಸಂಭವಿಸಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಏರ್ ಪೋರ್ಟ್ ರಸ್ತೆಯ ಉತ್ತರ ತಾಲೂಕಿನ ಬೆಟ್ಟಹಲಸೂರು ಕ್ರಾಸ್ ಬಳಿ ನಡೆದಿದೆ.
ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಬಳಿಕ ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಮಳೆ ಬರುತ್ತಿದ್ದ ಹಿನ್ನೆಲೆ ರಸ್ತೆ ಸರಿಯಾಗಿ ಕಾಣದೇ ಕಾರು ಡಿವೈಡರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಚಿಕ್ಕಜಾಲನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Advertisement. Scroll to continue reading.