ಚಿಕ್ಕಬಳ್ಳಾಪುರ : ಪ್ರವಾಸಿಗರ ನೆಚ್ಚಿನ ತಾಣಗಳಲ್ಲೊಂದಾದ ನಂದಿ ಗಿರಿಧಾಮ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಡಿಸೆಂಬರ್ 1 ರಿಂದ ಅಂದರೆ ನಾಳೆಯಿಂದ ನಂದಿ ಗಿರಿಧಾಮ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್ ಅವರು ಮಾಹಿತಿ ನೀಡಿದ್ದಾರೆ. ರಸ್ತೆ ಕೊಚ್ಚಿ ಹೋಗಿ ಬಂದ್ ಆಗಿದ್ದ ನಂದಿ ಗಿರಿಧಾಮ ಪ್ರವೇಶಕ್ಕೆ ಇದೀಗ ಅವಕಾಶ ಸಿಕ್ಕಿದೆ.
ನಾಳೆಯಿಂದ ನಂದಿ ಬೆಟ್ಟಕ್ಕೆ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
Advertisement. Scroll to continue reading.

ಶನಿವಾರ ಮತ್ತು ಭಾನುವಾರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಬೆಟ್ಟದಲ್ಲಿ ಹೋಟೆಲ್, ರೂಮ್ ಗಳನ್ನು ಬುಕಿಂಗ್ ಮಾಡಿದವರಿಗೆ ಮಾತ್ರ ಶನಿವಾರ ಭಾನುವಾರ ಅವಕಾಶ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.
In this article:chikkaballapura, Diksoochi news, Diksoochi t v, diksoochiudupi, nandi hills
Click to comment

































