ಉಡುಪಿ : ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆ -2021ರ ಅಂಗವಾಗಿ ಮುಕ್ತ ಹಾಗೂ ಶಾಂತಿಯು ಚುನಾವಣೆ ನಡೆಸುವ ಹಿನ್ನೆಲೆ ಜಿಲ್ಲೆಯಾದ್ಯಂತ ಡಿ.8ರ ಸಂಜೆ 4 ರಿಂದ ಡಿ.10ರ ರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟ ಹಾಗೂ ಮದ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದಾರೆ.
ಈ ಆದೇಶ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿರುವಂತ ಇತರೆ ಜಿಲ್ಲೆಗಳಲ್ಲಿಯೂ ಅನ್ವಯಿಸಲಿದ್ದು, ಎಲ್ಲಾ ನಿಷೇಧಿತ ಅವಧಿಯಲ್ಲಿ ಮದ್ಯ ಮಾರಾಟ, ಶೇಖರಣೆ, ಮದ್ಯಪಾನ ನಿಷೇಧಿಸಿದ್ದು, ಬಿಯರ್ ಬಾರಗಳು, ಕ್ಲಬ್ಗಳು ಮತ್ತು ಮದ್ಯದ ಡಿಪೋಗಳನ್ನು ಮುಚ್ಚಲು ಸಹ ಆದೇಶಿಸಲಾಗಿದೆ. ಈ ದಿವಸಗಳನ್ನು ಶುಷ್ಕ ದಿನಗಳೆಂದು ಘೋಷಿಸಲಾಗಿದೆ.
ವಿಧಾನ ಪರಿಷತ್ ಚುನಾವಣೆ ನಡೆಯುತ್ತಿರುವಂತ 25 ಕ್ಷೇತ್ರಗಳ ವ್ಯಾಪ್ತಿಯ್ಲಲಿಯೂ ಡಿಸೆಂಬರ್ 8ರ ಸಂಜೆ 4ರಿಂದ ಡಿಸೆಂಬರ್ 10ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಬಂದ್ ಆಗಿರಲಿದೆ.

25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ 10ರಂದು ಮತದಾನ ನಡೆಯಲಿದೆ. ಡಿ.10ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14ಕ್ಕೆ ಮತ ಎಣಿಕೆ ನಡೆದು, ಅಂದೇ ಫಲಿತಾಂಶ ಹೊರ ಬೀಳಲಿದೆ.

































