ಮಂಗಳೂರು : ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಾಲ್ವರ ಸಾವಿಗೆ ಮತಾಂತರ ಕಾರಣವೆಂದು ಮೃತ ನಾಗೇಶ್ ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ.
ಇಂದು ಮಂಗಳೂರಿನ ಮಾರ್ಗನ್ಸ್ ಸ್ಟ್ರೀನ್ ಮನೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗೇಶ್ (30), ವಿಜಯಲಕ್ಷ್ಮೀ (26) ಮಕ್ಕಳಾದ ಸ್ವಪ್ನಾ(8) ಸಮಂತ್ (4) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ್ ಗ್ರಾಮದವರು ಎಂದು ತಿಳಿದು ಬಂದಿದೆ.
ಸದ್ಯ ಆತ್ಮಹತ್ಯೆ ಮಾಡಿಕೊಂಡಿರುವ ನಾಗೇಶ್ ಡೆತ್ ನೋಟ್ ಪತ್ತೆಯಾಗಿದೆ ಎನ್ನಲಾಗಿದ್ದು, ಡೆತ್ ನೋಟ್ ನಲ್ಲಿ ನಮ್ಮ ಸಾವಿಗೆ ನೂರ್ ಜಹಾನ್ ಎಂಬಾಕೆಯೇ ಕಾರಣ ಎಂದು ಉಲ್ಲೇಖಿಸಿರುವ ಬಗ್ಗೆ ತಿಳಿದು ಬಂದಿದೆ. ನನ್ನ ಪತ್ನಿ ವಿಜಯಲಕ್ಷ್ಮೀಯನ್ನು ತನ್ನ ಧರ್ಮಕ್ಕೆ ಮತಾಂತರ ಮಾಡಿದ್ದಳು. ಹೀಗಾಗಿ ವಿಜಯಲಕ್ಷ್ಮೀ ಅಗಾಗ ಮನೆ ಬಿಟ್ಟು ಹೋಗುತ್ತಿದ್ದಳು. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ನಾಗೇಶ್ ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ನೂರ್ ಜಹಾನ್ ಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ತನಿಖೆಯ ಮೇಲಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿದು ಬರಲಿದೆ.



































