ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಬೆಳಗಾವಿಯ ಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಡುವೆ ಜಿದ್ದಾ ಜಿದ್ದಿನ ಪೈಪೋಟಿ ಇತ್ತು. ಕಾಂಗ್ರೆಸ್ ತೊರೆದಿದ್ದ ಲಖನ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಎರಡನೇ ಸ್ಥಾನಕ್ಕೆ ತೃಪ್ತರಾಗಬೇಕಿದೆ.
ಮೂರನೇ ಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರು ಸೋಲು ಕಂಡಿದ್ದಾರೆ.
Advertisement. Scroll to continue reading.
ಬೆಂಗಳೂರು ಗ್ರಾಮಾಂತರ ವಿಧಾನಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಎಸ್.ರವಿ ಗೆಲುವು ಸಾಧಿಸಿದ್ದಾರೆ.