ವರದಿ : ದಿನೇಶ್ ರಾಯಪ್ಪನಮಠ
ಕೋಟ: ಸಹಕಾರಿ ರಂಗದ ಅಗ್ರಗಣ್ಯ ಸಹಕಾರಿ ಸಂಘಗಳಿಗೆ ಕೊಡಮಾಡುವ ಪ್ರಶಸ್ತಿಗೆ ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ದೊರೆತಿದೆ.
ಮಂಗಳವಾರ ಮಂಗಳೂರಿನಲ್ಲಿ ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಈ ಪ್ರಶಸ್ತಿಯನ್ನು ಡಾ.ಎಂ.ಎನ್. ರಾಜೇಂದ್ರ ಕುಮಾರ್ ರಿಂದ ಸಂಘದ ಅಧ್ಯಕ್ಷ ಜಿ ತಿಮ್ಮ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಶರತ್ ಕುಮಾರ್ ಶೆಟ್ಟಿ ಸ್ವೀಕರಿಸಿದರು.
ಸಂಘದ ನಿರ್ದೇಶಕ ವಸಂತ್ ಕುಮಾರ್ ಶೆಟ್ಟಿ ಬನ್ನಾಡಿ,ನಿಕಟಪೂರ್ವ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ಶೆಟ್ಟಿ ಉಪಸ್ಥಿತರಿದ್ದರು.
Advertisement. Scroll to continue reading.