ಬೆಳಗಾವಿ : ಇಂದು ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕದ ಮೇಲೆ ಚರ್ಚೆ ಹಿನ್ನೆಲೆಯಲ್ಲಿ ಸುವರ್ಣ ಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ. ಸ್ಪೀಕರ್ ವಿಶ್ವೇಶ್ವರ ಕಾಗೇರಿ ಈ ಆದೇಶ ಹೊರಡಿಸಿದ್ದಾರೆ ಎನ್ನಲಾಗಿತ್ತು.
ಈ ಬಗ್ಗೆ ಸ್ಪಷ್ಟನೆ ನೀಡಿದ ಕಾಗೇರಿ, ಸುವರ್ಣಸೌಧಕ್ಕೆ ಮಾಧ್ಯಮ ಪ್ರತಿನಿಧಿಗಳನ್ನು ತಡೆಯುವಂತೆ ನಾನು ಆದೇಶ ಮಾಡಿಲ್ಲ ಎಂದಿದ್ದಾರೆ.
ಯಾವುದೋ ಒಂದು ಹಂತದಲ್ಲಿ ಗೊಂದಲ ಸೃಷ್ಟಿಯಾಗಿದೆ. ಮಾಧ್ಯಮಗಳನ್ನು ತಡೆಯುವಂತೆ ನಾನು ಆದೇಶ ಮಾಡಿಲ್ಲ. ಇದುವರೆಗೆ ಇದ್ದಂತೆಯೇ ಅನುಮತಿ ನೀಡಲು ಪೊಲೀಸರು, ಮಾರ್ಷಲ್ ಗಳಿಗೆ ಸೂಚನೆ ನೀಡಿದ್ದೇನೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
Advertisement. Scroll to continue reading.

ಇಂದು ಮತಾಂತರ ನಿಷೇಧ ವಿಧೇಯಕದ ಮೇಲೆ ಚರ್ಚೆ ಹಿನ್ನೆಲೆಯಲ್ಲಿ ಸುವರ್ಣಸೌಧಕ್ಕೆ ಮಾಧ್ಯಮ ಪ್ರತಿನಿಧಿಗಳನ್ನು ಸುವರ್ಣಸೌಧದ ಒಳಗೆ ಬಿಡದಂತೆ ಸ್ಪೀಕರ್ ಕಾಗೇರಿ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಪ್ರತಿಭಟನೆಯನ್ನೂ ನಡೆಸಿದ್ದರು.