Connect with us

Hi, what are you looking for?

Diksoochi News

ರಾಷ್ಟ್ರೀಯ

ಬಿಹಾರ : ಕಾರ್ಖಾನೆಯ ಬಾಯ್ಲರ್ ಸ್ಫೋಟ; 6 ಕಾರ್ಮಿಕರ ಸಾವು

1

ಬಿಹಾರ: ಕಾರ್ಖಾನೆಯ ಬಾಯ್ಲರ್ ಸ್ಫೋಟಗೊಂಡು, ಆರು ಕಾರ್ಮಿಕರು ಸಾವನ್ನಪ್ಪಿದ್ದು, ಅಲ್ಲಿದ್ದ ಹಲವರು ಗಾಯಗೊಂಡಿರುವ ಘಟನೆ ಬಿಹಾರದ ಮುಜಾಫರ್‌ಪುರದ ಬೇಲಾದಲ್ಲಿ ನಡೆದಿದೆ.

ರಕ್ಷಣಾ ಕಾರ್ಯಾಚರಣೆಯು ಮುಂದುವರಿದಿದ್ದು, ಕಾರ್ಖಾನೆಯ ಅವಶೇಷಗಳ ಅಡಿಯಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿರುವುದಾಗಿ ವರದಿಯಾಗಿದೆ.

ನ್ಯೂಡಲ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಸಮೀಪದ ಮತ್ತೊಂದು ಘಟಕಕ್ಕೂ ಹಾನಿಯಾಗಿದ್ದು, ಅದರಲ್ಲಿ ಮಲಗಿದ್ದ ಇಬ್ಬರು ಕಾರ್ಮಿಕರಿಗೂ ಗಾಯಗಳಾಗಿವೆ.

Advertisement. Scroll to continue reading.

ಸುಮಾರು ನಾಲ್ಕು ಕಿಲೋಮೀಟರ್ ವರೆಗೆ ಕಂಪಿಸಿದ ಅನುಭವಾಗಿದೆ ಎನ್ನಲಾಗಿದೆ. ಸುತ್ತಮುತ್ತಲಿನ ಪ್ರದೇಶದ ಅನೇಕ ಮನೆಗಳ ಬಾಗಿಲು ಮತ್ತು ಕಿಟಕಿಗಳು ಅಲುಗಾಡಿದವು ಎನ್ನಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!