ಅದಿತಿ ಪ್ರಭುದೇವ ಎಂಗೇಜ್ಮೆಂಟ್ ! ಕನಸು ನನಸಾಯ್ತು ಎಂದ ನಟಿ
Published
3
ಚಂದನವನ : ಕನ್ನಡ ಚಿತ್ರರಂಗದ ಮುದ್ದು ನಟಿ ಅದಿತಿ ಪ್ರಭುದೇವ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸ್ವತಃ ಅದಿತಿ ಪ್ರಭುದೇವ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.
ಹೌದು, ಇನ್ಸ್ಟಾಗ್ರಾಂನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದು, ಒಂದು ಕನಸಿನಂತೆ ಈ ಕನಸು ನನಸಾಯಿತು’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋದಲ್ಲಿ ಅದಿತಿ ಕೈಯಲ್ಲಿರುವ ಉಂಗುರ ಹೈಲೈಟ್ ಆಗಿದೆ.
ಭಾನುವಾರ (ಡಿಸೆಂಬರ್ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗೆ ಅಷ್ಟೇ ಆಹ್ವಾನ ಇತ್ತು ಎಂದು ತಿಳಿದು ಬಂದಿದೆ.