ಕ್ರೀಡೆ : ಭಾರತ ಹಾಗೂ ದಕ್ಷಿಣ ಆಫ್ರಿಕಾದ ನಡುವೆ ಸೆಂಚುರಿಯನ್ ಮೈದಾನದಲ್ಲಿ ನಡೆದಂತ ಮೊದಲ ಟೆಸ್ಟ್ ಪಂದ್ಯಾವಳಿಯಲ್ಲಿ ಭಾರತ ಐತಿಹಾಸಿಕ ಗೆಲುವು ಸಾಧಿಸಿದೆ. 113 ರನ್ ಗಳ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿದೆ.
ಸೆಂಚುರಿಯನ್ ಮೈದಾನದಲ್ಲಿ ಇಂದು ದಕ್ಷಿಣ ಆಫ್ರಿಕಾ ಮತ್ತು ಭಾರತದ ನಡುವೆ ಮೊದಲ ಟೆಸ್ಟ್ ಪಂದ್ಯಾವಳಿ ನಡೆಯಿತು. ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 327 ರನ್ ಗಳಿಸಿದರೆ, ದ್ವಿತೀಯ ಇನ್ನಿಂಗ್ಸ್ ನಲ್ಲಿ 174 ರನ್ ಗಳನ್ನು ಕಂಡಿತು. ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್ ನಲ್ಲಿ 197, ದ್ವಿತೀಯ ಇನ್ನಿಂಗ್ಸ್ ನಲ್ಲಿ 191 ರನ್ನಗಳನ್ನು ಗಳಿಸಿತು. ಈ ಮೂಲಕ ಭಾರತ ಗೆಲುವಿನ ನಗೆ ಬೀರಿತು.
ಮೊದಲ ಟೆಸ್ಟ್ ಸರಣಿ ಪಂದ್ಯದಲ್ಲಿ 1-0 ಮುನ್ನಡೆಯನ್ನು ಕಂಡು ಭಾರತವು 113 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಇದೇ ಮೊದಲ ಬಾರಿಗೆ ಸೆಂಚುರಿಯನ್ ಮೈದಾನದಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವನ್ನು ಸಾಧಿಸಿದೆ.

ಕಳೆದೆರಡು ಪಂದ್ಯಗಳಲ್ಲಿ ಈ ಮೈದಾನದಲ್ಲಿ ಹೀನಾಯ ಸೋಲು ಕಂಡಿತ್ತು. ಆದರೆ ಈ ಬಾರಿ ಭಾರತ ದಕ್ಷಿಣ ಆಫ್ರಿಕಾವನ್ನು ಸೋಲಿಸಿದ ಏಷ್ಯಾದ ಮೊದಲ ತಂಡವಾಗಿ ಹೊರಹೊಮ್ಮಿದೆ.

































