ಕೋಟ : ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಇಸ್ರೋ ಸಹಾಯಕ ನಿರ್ದೇಶಕ ಡಾ.ಎಸ್.ವಿ ಮೂರ್ತಿ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ದೇವಳದ ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ ಮತ್ತು ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ ದೇವಸ್ಥಾನದ ವತಿಯಿಂದ ಸನ್ಮಾನಿಸಿ ಗೌರವಿಸಿದರು.
ಅರ್ಚಕ ವೆಂಕಟನಾರಾಯಣ ಉಪಾಧ್ಯಾಯ ಹಾಗೂ ಸಹೋದರರು, ದೇಗುಲದ ಮ್ಯಾನೇಜರ್ ನಟೇಶ್ ಕಾರಂತ್, ಅರ್ಚಕ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Advertisement. Scroll to continue reading.