ಬೆಂಗಳೂರು: ಇನ್ಫೋಸಿಸ್ ಫೌಂಡೇಶನ್ನ ಅಧ್ಯಕ್ಷೆ ಸುಧಾ ಮೂರ್ತಿ ಅವರು ಶುಕ್ರವಾರ ಇನ್ಫೋಸಿಸ್ ಫೌಂಡೇಶನ್ನ ಅಧ್ಯಕ್ಷೆ ಹುದ್ದೆಯನ್ನು ತ್ಯಜಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಈ ನಡುವೆ ಅವರು ಹಲವು ದಶಕಗಳಿಂದ ಸಲ್ಲಿಸುತ್ತಿರುವ ಸಮಾಜ ಸೇವೆಯನ್ನು ಮುಂದುವರೆಸಿಕೊಂಡು ಹೋಗಲು ಅವರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.
ಸುಧಾ ಮೂರ್ತಿ ಕಂಪ್ಯೂಟರ್ ವಿಜ್ಞಾನಿ ಮತ್ತು ಎಂಜಿನಿಯರ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. 1996ರಲ್ಲಿ ಸ್ಥಾಪಿಸಿದ್ದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆಯಾಗಿದ್ದರು. ಇದಲ್ಲದೇ ಅವರು ‘ಬಿಲ್ ಗೇಟ್ಸ್ ಪ್ರತಿಷ್ಠಾನ’ದ ಸಾರ್ವಜನಿಕ ಆರೋಗ್ಯ ಉಪಕ್ರಮಗಳ ಸದಸ್ಯರಾಗಿದ್ದಾರೆ. ಲೇಖಕಿಯೂ ಹೌದು. ಕನ್ನಡ, ಇಂಗ್ಲಿಷ್ ಕೃತಿಗಳು ಅವರಿಂದ ರಚನೆಯಾಗಿವೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, Infosys, Sudha Murthi
Click to comment

































