ಪಾಟ್ನಾ: ವೇಗವಾಗಿ ಬಂದ ಟ್ರಕ್ ನಿಯಂತ್ರಣ ತಪ್ಪಿ ಪೊಲೀಸ್ ವಾಹನದ ಮೇಲೆ ಪಲ್ಟಿಯಾದ ಪರಿಣಾಮ ಮೂವರು ಪೊಲೀಸರು ಸಾವನ್ನಪ್ಪಿರುವ ಘಟನೆ ದಾನಪುರದ ಬಳಿ ನಡೆದಿದೆ.
ಇಂದು ಮುಂಜಾನೆ ಬಿಹಾರದ ರಾಜಧಾನಿ ಪಾಟ್ನಾದ ದಾನಪುರ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ವಾಹನದ ಮೇಲೆ ಟ್ರಕ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ.
ಅಗ್ನಿ ಶಾಮಕ ದಳ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದೆ. ಈ ವೇಳೆ ಮೂವರು ಪೊಲೀಸರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಾಹನವು ಗಾರ್ಡನಿಬಾಗ್ ಪೊಲೀಸ್ ಠಾಣೆಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ.
Advertisement. Scroll to continue reading.