ಪುಲ್ವಾಮಾ : ಜಮ್ಮುಕಾಶ್ಮೀರದಲ್ಲಿ ಇಂದು ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಚಂದ್ ಗಾಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ ಕೌಂಟರ್ ನಡೆಯುತ್ತಿದ್ದು, ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಇದರಲ್ಲಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಮೂವರು ಉಗ್ರರು ಹತ್ಯೆಗೀಡಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದ್ದು, ಅವರಲ್ಲಿ ಒಬ್ಬ ಪಾಕಿಸ್ತಾನ ಮೂಲದವನಾಗಿದ್ದಾನೆ. ಇನ್ನೂ ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗಿದೆ.
Advertisement. Scroll to continue reading.