ಪಾಕುರ್ : ಗ್ಯಾಸ್ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಟ್ರಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಏಳು ಜನರು ಸಾವನ್ನಪ್ಪಿರುವ ಘಟನೆ ಜಾರ್ಖಂಡ್ನ ಪಾಕುರ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ಘಟನೆಯಲ್ಲಿ 24 ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಅಮ್ರಪಾರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೇರ್ಕೋಲಾ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.
Advertisement. Scroll to continue reading.

ಘಟನೆಯಿಂದ ಹಲವರು ಜನರು ಬಸ್ಸಿನೊಳಗೆ ಸಿಕ್ಕಿಹಾಕಿಕೊಂಡಿದ್ದು, ಗ್ಯಾಸ್ ಕಟರ್ಗಳೊಂದಿಗೆ ಸರಳುಗಳನ್ನು ಕಿತ್ತು ಹಾಕಿ ಹೊರತರಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಒಂದಕ್ಕೊಂದು ಸಿಕ್ಕಿಹಾಕಿಕೊಂಡಿತ್ತು. ಅದೃಷ್ಟವಶಾತ್, ಟ್ರಕ್ನಲ್ಲಿದ್ದ ಯಾವುದೇ ಗ್ಯಾಸ್ ಸಿಲಿಂಡರ್ಗಳು ಸ್ಫೋಟಗೊಂಡಿಲ್ಲ, ಇಲ್ಲದಿದ್ದರೆ ಅಪಘಾತವು ಇನ್ನೂ ಹೆಚ್ಚಿನ ಜೀವಗಳನ್ನು ತೆಗೆದುಕೊಳ್ಳುತ್ತಿತ್ತು ಎನ್ನಲಾಗಿದೆ.