ಚಂದನವನ : ನಟಿ ಶುಭ ಪೂಂಜಾ ಇಂದು ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಬಹುಕಾಲದ ಗೆಳೆಯ ಸುಮಂತ್ ಜೊತೆ ಸಪ್ತಪದಿ ತುಳಿದಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿರುವ ಅವರು, ನಾನು ಮತ್ತು ಸುಮಂತ್ ಗುರು – ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲೆ ಇರಲಿ” ಎಂದು ಬರೆದುಕೊಂಡಿದ್ದಾರೆ.
ವೈವಾಹಿಕ ಜೀವನಕ್ಕೆ ಕಾಲಿಟ್ಟ ಶುಭಾ ಪೂಂಜಾರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.