ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಇದೀಗ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ನನಗೆ ಕೋವಿಡ್ ದೃಢವಾಗಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಚಿವ ಆರ್.ಅಶೋಕ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
Advertisement. Scroll to continue reading.