ಹಿರೇಬೆಟ್ಟು : ಆಜಾದಿ ಕಾ ಅಮೃತ್ ಮಹೋತ್ಸವ ಅಭಿಯಾನದ ಅಡಿಯಲ್ಲಿ ಪ್ರಾಥಮಿಕ ಅರೋಗ್ಯ ಕೇಂದ್ರ ಹಿರೇಬೆಟ್ಟು ಆಯೋಜನೆಯಲ್ಲಿ ಮೊರಾರ್ಜಿ ದೇಸಾಯಿ ಸ್ಕೂಲ್ ಹಿರೇಬೆಟ್ಟು ನಲ್ಲಿ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಮತ್ತು ಕ್ಷಯ ರೋಗದ ಮಾಹಿತಿ ಕಾರ್ಯಾಗಾರ ನಡೆಯಿತು.
ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಕೇಂದ್ರದ ಉಡುಪಿ ಕ್ಷಯ ಘಟಕ ದ ಮೇಲ್ವಿಚಾರಕ ಪ್ರಶಾಂತ್ ಶೆಟ್ಟಿ ಕ್ಷಯ ರೋಗದ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲೆ ಪೂರ್ಣಿಮಾ , ಉಪನ್ಯಾಸಕರು, ಪ್ರಾಥಮಿಕ ಅರೋಗ್ಯ ಸುರಕ್ಷಣಾ ಅಧಿಕಾರಿ ಸುಮಂಗಲ ಉಪಸ್ಥಿತರಿದ್ದರು. ಶಿಕ್ಷಣ ಸಂಸ್ಥೆಯ ಸಂಧ್ಯಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Advertisement. Scroll to continue reading.