ಉತ್ತರಪ್ರದೇಶ : ಸ್ವಾಮಿ ಪ್ರಸಾದ್ ಮೌರ್ಯ ತಮ್ಮ ಕಾರ್ಮಿಕ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ. ಸದ್ಯ ಬಿಜೆಪಿ ಯೋಗಿ ಸರ್ಕಾರದಲ್ಲಿ ಮಂತ್ರಿಯಾಗಿರುವ ಸ್ವಾಮಿ ಪ್ರಸಾದ್, ಸಮಾಜವಾದಿ ಪಕ್ಷ ಸೇರಿದ್ದಾರೆ.
ಇನ್ನು ಅವರೊಂದಿಗೆ ಅವ್ರು ಕೆಲವು ಬೆಂಬಲಿತ ಶಾಸಕರಿದ್ದು, ಅವ್ರು ಕೂಡ ಬಿಜೆಪಿ ತೊರೆದು ಎಸ್ ಪಿ ಸೇರಬಹುದು ಎನ್ನಲಾಗುತ್ತಿದೆ.
ಸ್ವಾಮಿ ಪ್ರಸಾದ್ ಮೌರ್ಯ ಅವ್ರು ಟಿಕೆಟ್ ಹಂಚಿಕೆ ಕುರಿತು ಅಸಮಾಧಾನ ಹೊರ ಹಾಕಿದ್ದು, ಈ ಕಾರಣದಿಂದ್ಲೇ ಸಧ್ಯ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆಯನ್ನು ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರಿಗೆ ಕಳುಹಿಸಿದ್ದಾರೆ.

ಇದರೊಂದಿಗೆ ಸ್ವಾಮಿ ಪ್ರಸಾದ್ ಮೋರಿಯಾ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) ತೊರೆದು ಸಮಾಜವಾದಿ ಪಕ್ಷ (ಎಸ್ಪಿ) ಸೇರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಸ್ವಾಮಿ ಪ್ರಸಾದ್ ಮೌರ್ಯ ಮಾಹಿತಿ ಹಂಚಿಕೊಂಡಿದ್ದು,
ದಲಿತರು, ಹಿಂದುಳಿದವರು, ರೈತರು, ನಿರುದ್ಯೋಗಿ ಯುವಕರು ಮತ್ತು ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಿಗಳ ತೀವ್ರ ನಿರ್ಲಕ್ಷ್ಯ ಧೋರಣೆಯಿಂದಾಗಿ ನಾನು ಉತ್ತರ ಪ್ರದೇಶದ ಯೋಗಿ ಸಂಪುಟಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

