Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ : ಶಿವಪುರ ಬ್ಯಾಣದಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಪ್ರಯಾಣಿಕರಿಗೆ ಗಂಭೀರ ಗಾಯ

3

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ಮಧ್ಯಾಹ್ನ ಶಿವಪುರ ಬ್ಯಾಣ ಎಂಬಲ್ಲಿ ನಡೆದಿದೆ. ಪರಿಣಾಮ ಐವರಿಗೆ ಗಂಭೀರ ಗಾಯಗಳಾಗಿವೆ.

ಕಾರು ಶೃಂಗೇರಿ ಕಡೆಯಿಂದ ಉಡುಪಿಗೆ ಸಾಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 169A ಶಿವಪುರ ಬ್ಯಾಣ ಎಂಬಲ್ಲಿ ಕಾರಿನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಒಟ್ಟು ಚಾಲಕನ ಸಹಿತ 5ಜನ ಪ್ರಯಾಣಿಸುತ್ತಿದ್ದರು. ಅಪಘಾತದಿಂದ 5 ಜನರಿಗೂ ಗಂಭೀರ ಸ್ವರೂಪದ ಗಾಯಗಳಾಗಿವೆ. ಕೂಡಲೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement. Scroll to continue reading.

ಡಿಕ್ಕಿ ಹೊಡೆದ ರಭಸಕ್ಕೆ ಮಾರುತಿ ಎರ್ಟಿಗಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಬಗ್ಗೆ ಹೆಬ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯ ಸಂಚಾರಕ್ಕೆ ಕೆಲ ಸಮಯ ತಡೆಯುಂಟಾಗಿತ್ತು.

ಸ್ಥಳಕ್ಕೆ ಆಗಮಿಸಿದ ಹೆಬ್ರಿ ಪೊಲೀಸ್ ರು ಅಪಘಾತಗೊಂಡ ಕಾರನ್ನು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!