Connect with us

Hi, what are you looking for?

Diksoochi News

ರಾಷ್ಟ್ರೀಯ

ದೇಶದಲ್ಲಿ ಕೊರೋನಾ ಹೆಚ್ಚಳ: ರಾಜ್ಯಗಳ ಸಿಎಂಗಳೊಂದಿಗೆ ಇಂದು ಪ್ರಧಾನಿ ಮೋದಿ ಸಭೆ

2

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೆಚ್ಚುತ್ತಿರುವ ಕೋವಿಡ್ 19 ಪರಿಸ್ಥಿತಿಯ ಕುರಿತು ಇಂದು ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎನ್ನಲಾಗಿದೆ.

ಪ್ರಧಾನಿ ಮೋದಿ ಅವರು ಇಂದು ಸಂಜೆ 4:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂಬಂಧಿತ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಭಾನುವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೋವಿಡ್ ಪರಿಸ್ಥಿತಿಯನ್ನು ಪ್ರಧಾನಿ ಮೋದಿ ಪರಿಶೀಲಿಸಿದ್ದರು. ಜಿಲ್ಲಾ ಮಟ್ಟದಲ್ಲಿ ಸಾಕಷ್ಟು ಆರೋಗ್ಯ ಮೂಲಸೌಕರ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ಮಿಷನ್ ಮೋಡ್‌ನಲ್ಲಿ ಹದಿಹರೆಯದವರಿಗೆ ಲಸಿಕೆ ಚಾಲನೆಯನ್ನು ವೇಗಗೊಳಿಸಲು ಕರೆ ನೀಡಿದ್ದರು.

Advertisement. Scroll to continue reading.

ಭಾರತದಲ್ಲಿ COVID-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, 3,60,70,510 ಕ್ಕೆ ಏರಿದೆ. ಇದರಲ್ಲಿ ಒಮಿಕ್ರಾನ್ ರೂಪಾಂತರದ 4,868 ಪ್ರಕರಣಗಳು ಸೇರಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!