ಚಿಕ್ಕಮಗಳೂರು: ಕಾರಿನ ಟೈರ್ ಸ್ಫೋಟಗೊಂಡು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದ ಸೇತುವೆ ಬಳಿ ನಡೆದಿದೆ.
ರಾಜಶೇಖರ್ ಮತ್ತು ಮಣಿಕಂಠ ಮೃತ ದುರ್ದೈವಿಗಳು. ಕಾರಿನ ಟೈರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ
Advertisement. Scroll to continue reading.