ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಸಿನಿ ತಾರೆಯರಿಗೆ, ಕ್ರಿಕೆಟಿಗರಿಗೆ, ರಾಜಕಾರಣಿಗಳಿಗೆ ಈಗಾಗಲೇ ಕೊರೋನಾ ದೃಢಪಟ್ಟಿದೆ. ಈ ನಡುವೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊವೀಡ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದೆ. ವರದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ದೇವೇಗೌಡರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
Advertisement. Scroll to continue reading.