ಪಣಜಿ: ಬಿಜೆಪಿಯ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಲಕ್ಷ್ಮೀಕಾಂತ್ ಪರ್ಸೇಕರ್ ಘೋಷಿಸಿದ್ದಾರೆ. ಈ ಮೂಲಕ ಬಿಜೆಪಿಗೆ ಗೋವಾ ವಿಧಾನಸಭಾ ಚುನಾವಣೆಗೂ ಮುನ್ನ ಆಘಾತವಾಗಿದೆ.
ಈ ಹಿಂದೆ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಕೂಡ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಇಬ್ಬರೂ ನಾಯಕರಿಗೆ ಅವರ ಸಾಂಪ್ರದಾಯಿಕ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿಲ್ಲ. ಹೀಗಾಗಿ ಇವರಿಬ್ಬರೂ ಬಿಜೆಪಿಯಿಂದ ದೂರ ಸರಿದಿದ್ದಾರೆ ಎನ್ನಲಾಗಿದೆ.
Advertisement. Scroll to continue reading.