ಮುಂಬೈ : ನಾಲ್ವರು ಕಾಮುಕರಿಂದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮುಂಬೈನಲ್ಲಿ ಶನಿವಾರ ಬೆಳಗಿನ ಜಾವ 4.30 ರ ಸುಮಾರಿಗೆ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಶನಿವಾರ ಮುಂಜಾನೆ 19 ವರ್ಷದ ಯುವತಿಯನ್ನು ಅಪಹರಿಸಿ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಮೂವರನ್ನು ಬಂಧಿಸಲಾಗಿದೆ, ಅವರಲ್ಲಿ ಇಬ್ಬರು ಅಪ್ರಾಪ್ತರು, ಮತ್ತು ನಾಲ್ಕನೇ ಶಂಕಿತನನ್ನು ಬಂಧಿಸಲು ಪೊಲೀಸ್ ತಂಡವು ಯುಪಿಗೆ ತೆರಳಿದೆ ಎನ್ನಲಾಗಿದೆ.
Advertisement. Scroll to continue reading.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.