ಕಾಪು: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾಪು ಠಾಣಾ ವ್ಯಾಪ್ತಿಯ ಮೂಳೂರು ಸಿಎಸ್ಐ ಸ್ಕೂಲ್ ಮುಂಭಾಗದಲ್ಲಿ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳೂರು ಕಡೆಯಿಂದ ಉಡುಪಿಯತ್ತ ಚಲಿಸುತ್ತಿದ್ದ ಲಾರಿ ಉಡುಪಿ ಕಡೆಯಿಂದ ಬರುತ್ತಿದ್ದ ಫಲ್ಸರ್ ಬೈಕಿಗೆ ಡಿಕ್ಕಿಯಾಗಿದೆ.ಅಪಘಾತದ ತೀವ್ರತೆಗೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಬೈಕ್ ಸವಾರನ ಗುರುತು ಇನ್ನಷ್ಟೆ ಪತ್ತೆಯಾಗಬೇಕಿದೆ.ಕಾಪು ಪೊಲೀಸರು ಸ್ಥಳಕ್ಕೆ ದಾವಿಸಿ ತನಿಖೆ ನಡೆಸಿದ್ದಾರೆ.