ಕ್ರೀಡೆ : ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಐಸಿಸಿ ವಾರ್ಷಿಕ ಅತ್ಯುತ್ತಮ ಮಹಿಳಾ ಕ್ರಿಕೆಟರ್ ಆಗಿ ಆಯ್ಕೆಯಾಗಿದ್ದಾರೆ.
ಐಸಿಸಿ ಸೋಮವಾರ ಈ ವಿಷಯವನ್ನು ಪ್ರಕಟಿಸಿದೆ. ಸ್ಮೃತಿ ಮಂದಾನ ಕಳೆದ ವರ್ಷ ಒಟ್ಟು 22 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಇಷ್ಟು ಪಂದ್ಯಗಳಲ್ಲಿ ಅವರು 38.86 ಸರಾಸರಿಯಲ್ಲಿ 855 ರನ್ ಗಳಿಸಿದ್ದರು. ಈ ಅವಧಿಯಲ್ಲಿ ಒಂದು ಶತಕ ಮತ್ತು ಐದು ಅರ್ಧ ಶತಕಗಳನ್ನು ಬಾರಿಸಿದ್ದರು.
ಸ್ಮೃತಿ ಕಳೆದ ವರ್ಷ ಆಟದ ಎಲ್ಲಾ ಮೂರು ಸ್ವರೂಪಗಳಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದು, ಅದಕ್ಕಾಗಿಯೇ ಐಸಿಸಿ ಅವರನ್ನು ರಾಚೆಲ್ ಹೇಹೋ ಫ್ಲಿಂಟ್ ಟ್ರೋಫಿಗೆ ಆಯ್ಕೆ ಮಾಡಿದೆ. ಮಂಧಾನ ಭಾರತದ ಅತ್ಯುತ್ತಮ ಬ್ಯಾಟರ್ ಗಳಲ್ಲಿ ಒಬ್ಬರಾಗಿದ್ದಾರೆ. ಅಲ್ಲದೆ ವರ್ಷದಿಂದ ವರ್ಷಕ್ಕೆ ತನ್ನ ಪ್ರದರ್ಶನದೊಂದಿಗೆ ತನ್ನ ಪ್ರಾಮುಖ್ಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, ICC Women's Cricketer of the Year, Indian Women Cricket Team, smrithi mandhana

Click to comment