ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಹತ್ತನೇ ತರಗತಿ ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 28 ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆಗಳು ನಡೆಯಲಿದೆ.
ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಪ್ರಕಟಿಸಿದ್ದು, ಮಾರ್ಚ್ 28 ರಿಂದ ಪರೀಕ್ಷೆ ಆರಂಭವಾಗಿ ಏಪ್ರಿಲ್ 11ಕ್ಕೆ ಮುಗಿಯಲಿವೆ.
- ದಿನಾಂಕ 28-03-2022ರ ಸೋಮವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ( ಎನ್ ಸಿ ಇ ಆರ್ ಟಿ ), ಸಂಸ್ಕೃತ
- ದಿನಾಂಕ 30-03-2022, ಬುಧವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
- ದಿನಾಂಕ 01-04-2022, ಶುಕ್ರವಾರ – ಕೋರ್ ಸಬ್ಜೆಕ್ಟ್ – ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥ ಶಾಸ್ತ್ರ
- ದಿನಾಂಕ 04-04-2022 ಸೋಮವಾರ – ಕೋರ್ ಸಬ್ಜೆಕ್ಟ್ – ಗಣಿತ, ಸಮಾಜ ಶಾಸ್ತ್ರ
- ದಿನಾಂಕ 06-04-2022, ಬುಧವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ
- ದಿನಾಂಕ 07-04-2022ರಂದು ಗುರುವಾರ ಪರೀಕ್ಷೆ ಇಲ್ಲ
- ದಿನಾಂಕ 08-04-2022 ಶುಕ್ರವಾರ ತೃತೀಯ ಭಾಷೆ – ಹಿಂದಿ ( NCERT ), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
- ದಿನಾಂಕ 08-04-2022- ಶುಕ್ರವಾರ ಎನ್ ಎಸ್ ಕ್ಯೂ ಎಫ್ ಪರೀಕ್ಷಾ ವಿಷಯಗಳು – ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್ಸ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
- ದಿನಾಂಕ 11-04-2022 ಸೋಮವಾರ – ಕೋರ್ ಸಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ
Advertisement. Scroll to continue reading.

In this article:Diksoochi news, diksoochi Tv, diksoochi udupi, Karnataka Board of Secondary Education

Click to comment