ಹೈದರಾಬಾದ್: ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಅವರು ಹೋಂ ಐಸೋಲೇಷನ್ ನಲ್ಲಿದ್ದಾರೆ.
ಈ ಕುರಿತಂತೆ ಚಿರಂಜೀವಿ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕಳೆದ ರಾತ್ರಿ ಕೊರೋನಾ ಗುಣಲಕ್ಷಣಗಳನ್ನು ಸಣ್ಣ ಪ್ರಮಾಣದಲ್ಲಿ ಹೊಂದಿತ್ತ ತಾವು ಪರೀಕ್ಷೆಗೆ ಒಳಪಟ್ಟಿದ್ದೆ. ಕೋವಿಡ್ ಪರೀಕ್ಷೆಯಲ್ಲಿ ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದೇನೆ. ತನ್ನ ಸಂಪರ್ಕದಲ್ಲಿದ್ದಂತ ಎಲ್ಲರೂ ಕೊರೋನಾ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದಾರೆ.

ಪ್ರಿಯರೇ, ಎಲ್ಲಾ ಮುನ್ನೆಚ್ಚರಿಕೆಗಳ ಹೊರತಾಗಿಯೂ, ನಾನು ನಿನ್ನೆ ರಾತ್ರಿ ಸೌಮ್ಯ ರೋಗಲಕ್ಷಣಗಳೊಂದಿಗೆ ಕೋವಿಡ್ 19 ಪಾಸಿಟಿವ್ ಅನ್ನು ಪರೀಕ್ಷಿಸಿದ್ದೇನೆ ಮತ್ತು ಮನೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಪರೀಕ್ಷೆಗೆ ಒಳಗಾಗುವಂತೆ ನಾನು ವಿನಂತಿಸುತ್ತೇನೆ.
ಶೀಘ್ರದಲ್ಲೇ ಹಿಂತಿರುಗಿಸಲು ಬಯಸುತ್ತೇನೆ, ಕಾಯಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.


































