ವರದಿ : ದಿನೇಶ್ ರಾಯಪ್ಪನಮಠ
ಕೋಟ: ಸಾಲಿಗ್ರಾಮ ಪಟ್ಟಣಪಂಚಾಯತ್ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ಪಟ್ಟಣಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಸಾಲಿಗ್ರಾಮದ ಪ್ರಸಿದ್ಧ ವೈದ್ಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಸುಧಾಕರ್ ಹಂದೆ ಇವರನ್ನು ಸನ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಪಟ್ಟಣಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ ವಹಿಸಿದ್ದರು.
Advertisement. Scroll to continue reading.

ಈ ಸಂದರ್ಭದಲ್ಲಿ ಪಟ್ಟಣಪಂಚಾಯತ್ ಉಪಾಧ್ಯಕ್ಷೆ ಅನುಸೂಯ ಆನಂದರಾಮ ಹೇರ್ಳೆ, ಮುಖ್ಯಾಧಿಕಾರಿ ಶಿವ ನಾಯ್ಕ್,ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವ ದೇವಾಡಿಗ,ಪಟ್ಟಣಪಂಚಾಯತ್ ಸದಸ್ಯರಾದ ಶ್ಯಾಮಸುಂದರ ನಾಯಿರಿ, ರಾಜು ಪೂಜಾರಿ, ಗಿರಿಜಾ ಪೂಜಾರಿ, ದೇವೇಂದ್ರ ದೇವಾಡಿಗ ಕರುಣಾಕರ ಪೂಜಾರಿ, ರತ್ನ ನಾಗರಾಜ್ ಗಾಣಿಗ,ರವೀಂದ್ರ ಕಾಮತ್, ಪಟ್ಟಣಪಂಚಾಯತ್ ಸಿಬ್ಬಂದಿವರ್ಗ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪಟ್ಟಣಪಂಚಾಯತ್ ಸಿಬ್ಬಂದಿ ಸುಮಿತ್ರ ನಿರೂಪಿಸಿದರು.
Advertisement. Scroll to continue reading.



































