ಪುಣೆ : ಕಾರು- ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆ-ಮುಂಬೈ ಎಕ್ಸ್ಪ್ರೆಸ್ವೇಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಕಾರಿನಲ್ಲಿದ್ದ ಐವರು ಪುಣೆ-ಮುಂಬೈ ಎಕ್ಸ್ಪ್ರೆಸ್ವೇಯಿಂದ ಮುಂಬೈ ಕಡೆಗೆ ಹೋಗುತ್ತಿದ್ದು, ಆಗ ಏಕಾಏಕಿ ಕಾರು ಬ್ಯಾಲೆನ್ಸ್ ಕಳೆದುಕೊಂಡು ಕಾರು ಡಿವೈಡರ್ ದಾಟಿ ಇನ್ನೊಂದು ಲೇನ್ ಗೆ ಹೋಗಿ ಎದುರಿನಿಂದ ಬರುತ್ತಿದ್ದ ಕಂಟೇನರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಇದರಿಂದ ಕಾರು ಜಖಂಗೊಂಡಿದ್ದು, ಅದರಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಇನ್ನು ಮೃತರು ಹರಿಯಾಣ ನಿವಾಸಿಗಳು ಎನ್ನಲಾಗಿದೆ.
Advertisement. Scroll to continue reading.
ಮೃತ ದೇಹಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.