ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಕ್ಷಾ ರಾಮಯ್ಯ 6 ತಿಂಗಳ ಅಧಿಕಾರಾವಧಿ ಮುಗಿದ ಹಿನ್ನಲೆ ಇಂದು ನಲಪಾಡ್ ಕ್ವೀನ್ಸ್ ರಸ್ತೆಯಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ.
ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ, ಹೆಚ್ಚು ಮತ ಗಳಿಸಿದ್ದ ಮೊಹಮ್ಮದ್ ನಲಪಾಡ್ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನ ಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು.
ಬಳಿಕ ಹಿರಿಯ ನಾಯಕರು ಸಂಧಾನ ನಡೆಸಿ ರಕ್ಷಾ ರಾಮಯ್ಯ ಅವರನ್ನು 6 ತಿಂಗಳ ಅವಧಿಗೆ ಅಧ್ಯಕ್ಷರನ್ನಾಗಿ ಘೋಷಿಸಿ ಅವರ ಅಧಿಕಾರದ ಅವಧಿ ಮುಗಿದ ಬಳಿಕ ಮೊಹಮ್ಮದ್ ನಲಪಾಡ್ ಗೆ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಇದೀಗ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ನಲಪಾಡ್ ಅಧಿಕಾರ ಸ್ವೀಕರಿಸಿದ್ದಾರೆ.
Advertisement. Scroll to continue reading.

In this article:Diksoochi news, Diksoochi t v, diksoochi udupi, Mohammad Naload, youth congress President

Click to comment