ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ ನೀಡಿ, ದೇವರ ದರ್ಶನ ಪಡೆದರು. ಈ ಸಂದರ್ಭ ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು ಜೊತೆಗಿದ್ದರು.

ಈ ಮಧ್ಯೆ ಯಶ್ ಅವರು ತಂಡದ ಜತೆ ಆನೆಗುಡ್ಡೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ನಟ ರಾಕಿಂಗ್ ಸ್ಟಾರ್ ಯಶ್ ಅವರು ಸದ್ಯ ಕೆಜಿಎಫ್ 2 ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿ ಇದ್ದು, ಕುಂದಾಪುರದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸ್ಟುಡಿಯೋದಲ್ಲಿ ‘ಕೆಜಿಎಫ್ 2’ ಚಿತ್ರದ ಮ್ಯೂಸಿಕ್ ಕೆಲಸಗಳು ನಡೆಯುತ್ತಿವೆ. ‘ಕೆಜಿಎಫ್ 2’ ಸಿನಿಮಾ ಟೀಂ ಜತೆ ಯಶ್ ಅಲ್ಲಿಗೆ ತೆರಳಿದ್ದಾರೆ.
Advertisement. Scroll to continue reading.

In this article:Diksoochi news, diksoochi udupi, Diksoochinews, kgf2, prashanth neel, Ravi Basruru, yash
Click to comment

































