ಹೇರಾಡಿ ಶ್ರೀಮತಿ ರುಕ್ಮಿಣಿ ಶೆಟ್ಟಿ ಸ್ಮಾರಕ ನ್ಯಾಷನಲ್ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಜನಾ ತಂಡ ಉದ್ಘಾಟನೆ
Published
2
ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಬಾರಕೂರು ಹೇರಾಡಿ ಶ್ರೀಮತಿ ರುಕ್ಮಿಣಿ ಶೆಟ್ಟಿ ಸ್ಮಾರಕ ನ್ಯಾಷನಲ್ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಚಟುವಟಿಕೆಗೆ ಪೂರಕವಾಗಿ ಭಜನಾ ತಂಡವನ್ನು ರಚಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಧರ್ಮಶಾಲೆ ಶ್ರೀ ಮಾಸ್ತಿಅಮ್ಮನವರ ದೇವಸ್ಥಾನದ ಅರ್ಚಕ ಅನಂತಪದ್ಮನಾಭ ಭಟ್, ಗುರುಗಳಾದ ರಾಘವೇಂದ್ರ ರಾವ್, ಶಾಲೆಯ ಮುಖ್ಯೋಪಾಧ್ಯಾಯ ರತ್ನಾಕರ ಶೆಟ್ಟಿ, ಶಾಲಾ ಸಮಿತಿಯ ಜಯಾನಂದ ಪೂಜಾರಿ, ಸಹಶಿಕ್ಷಕರು, ಪೋಷಕರು, ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.