ಬೆಂಗಳೂರು : ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಿಜಾಬ್ ವಿವಾದದ ಕುರಿತು ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.
ಹಿಜಾಬ್ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಇಂದು ಹೈಕೋರ್ಟ್ ವಿಚಾರಣೆ ನಡೆಸಲಿದೆ.
ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದ್ದರೂ ಕೂಡಾ ರಾಜ್ಯದ ಅನೇಕ ಜಿಲ್ಲೆಗಳ ಕಾಲೇಜುಗಳಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ತಾರಕಕ್ಕೇರಿದೆ.
Advertisement. Scroll to continue reading.

ಹಿಜಾಬ್ ಗೆ ಅನುಮತಿ ನೀಡುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಸೂಚಿಸಿರುವಂತೆ ಕೋರಿ ವಿದ್ಯಾರ್ಥಿನಿಯರು ಹೈಕೋರ್ಟ್ ನಲ್ಲಿ ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆ ಇಂದು ನಡೆಯಲಿದೆ. ಹಾಗಾಗಿ ಹೈಕೋರ್ಟ್ ಯಾವ ತೀರ್ಪು ನೀಡಲಿದೆ ಎಂಬ ಕುತೂಹಲವಿದೆ.
In this article:Diksoochi news, diksoochi Tv, diksoochi udupi, high court, Hijab controversy
Click to comment

































