ಬೆಂಗಳೂರು : ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ ರಾಜ್ಯ ವ್ಯಾಪಿ ಹಬ್ಬಿದೆ. ಹಲವೆಡೆ ಹಿಂಸಾತ್ಮಕ ರೂಪ ಪಡೆದಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ 3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಈ ಬಗ್ಗೆ ಸಚಿವ ಅಶ್ವಥ್ ನಾರಾಯಣ್ ಮಾಹಿತಿ ನೀಡಿದ್ದು, ಹಿಜಾಬ್ – ಕೇಸರಿ ವಿವಾದ ಹಿನ್ನೆಲೆಯಲ್ಲಿ ನಾಳೆಯಿಂದ 3 ದಿನಗಳ ಕಾಲ ರಜೆ ಘೋಷಿಸಲಾಗಿದೆ. ಹೈಸ್ಕೂಲ್, ಪಿಯುಸಿ,ಡಿಗ್ರಿ, ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ನೀಡಲಾಗಿದೆ. ವಿದ್ಯಾರ್ಥಿಗಳು ಶಾಂತಿ – ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.
Advertisement. Scroll to continue reading.