ನಾಗ್ಪುರ: ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿವಾದಾತ್ಮಕ ತೀರ್ಪು ನೀಡಿ ಸಾರ್ವಜನಿಕರ ವಲಯದಲ್ಲಿ ಟೀಕೆಗೆ ಗುರಿಯಾಗಿದ್ದ ಮುಂಬಯಿ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿ ಪುಷ್ಪಾ ಗನೇಡಿವಾಲಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಹೆಚ್ಚುವರಿ ನ್ಯಾಯಮೂರ್ತಿಯಾಗಿ ಸೇವಾವಧಿ ಪೂರ್ಣಗೊಳ್ಳಲು ಎರಡು ದಿನ ಇರುವಾಗಲೇ ಅವರು ರಾಜೀನಾಮೆ ನೀಡಿದ್ದಾರೆ.
‘ಚರ್ಮಕ್ಕೆ ಚರ್ಮ ತಾಕಿದರೆ ಮಾತ್ರವೇ ಲೈಂಗಿಕ ದೌರ್ಜನ್ಯವಾಗುತ್ತದೆ’ ಎಂದು ಪುಷ್ಪಾ ಅವರು ನೀಡಿದ್ದಂತಹ ತೀರ್ಪು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ವಿವಾದಿತ ತೀರ್ಪಿನ ಕಾರಣದಿಂದ ಪುಷ್ಪಾ ಅವರನ್ನು ಹೈಕೋರ್ಟ್ನ ಕಾಯಂ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ನಿರಾಕರಿಸಿದ್ದ ಸುಪ್ರೀಂ ಕೋರ್ಟ್ ಕೊಲಿಜಿಯಂ, 2021ರ ಫೆ.13ರಂದು ಹೆಚ್ಚುವರಿ ನ್ಯಾಯಮೂರ್ತಿಯಾಗಿ ಅವರ ಸೇವಾವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಿ ಆದೇಶಿಸಿತ್ತು.
Advertisement. Scroll to continue reading.

In this article:Diksoochi news, diksoochi udupi, diksoochitv, Judge, Pushpa ganediwala
Click to comment

































