ನವದೆಹಲಿ: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಜಾಜ್ ಮೋಟಾರ್ಸ್ ಚೇರ್ಮನ್ ರಾಹುಲ್ ಬಜಾಜ್ ಶನಿವಾರ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಬಜಾಜ್ 50 ವರ್ಷಗಳ ಕಾಲ ಅವರ ಕಂಪನಿಯ ಅಧ್ಯಕ್ಷರೂ ಆಗಿದ್ದರು.
1938ರ ಜೂನ್ 10 ರಂದು ಜನಿಸಿದ ರಾಹುಲ್ ಬಜಾಜ್ ಅವರು 40 ವರ್ಷಗಳ ಕಾಲ ಬಜಾಜ್ ಗ್ರೂಪ್ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಕಳೆದ ವರ್ಷ ಏಪ್ರಿಲ್ನಲ್ಲಿ ಬಜಾಜ್ ಆಟೋ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಸ್ತುತ ಬಜಾಜ್ ಸಂಸ್ಥೆಯ ಎಮೆರಿಟಸ್ ಅಧ್ಯಕ್ಷರಾಗಿದ್ದರು.
2001ರಲ್ಲಿ ಅವರಿಗೆ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ, ಗೌರವಿಸಲಾಗಿತ್ತು. ರಾಜ್ಯಸಭಾ ಸಂಸದರಾಗಿಯೂ ಅವರು ಸೇವೆ ಸಲ್ಲಿಸಿದ್ದರು.
Advertisement. Scroll to continue reading.

In this article:Bajaj Motors, Diksoochi news, Diksoochi t v, diksoochi udupi, Rahul Bajaj
Click to comment

































