Connect with us

Hi, what are you looking for?

Diksoochi News

ಕರಾವಳಿ

ಆರೂರು ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ; ಪೂರ್ವ ತಯಾರಿ ಬಗ್ಗೆ ಶಾಸಕ ರಘುಪತಿ ಭಟ್ ಸಭೆ

1

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಕಂದಾಯ ಸಚಿವ ಆರ್. ಅಶೋಕ್ ಅವರು ಫೆಬ್ರವರಿ 19 ರಂದು ಆರೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿ ಗ್ರಾಮಸ್ಥರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದು, ಬಳಿಕ ಕೊಕ್ಕರ್ಣೆ ಹಾಗೂ ಕಳ್ತೂರು ಗ್ರಾಮಕ್ಕೆ ಭೇಟಿ ನೀಡಲಿರುವುದರಿಂದ ಶಾಸಕ ಕೆ. ರಘುಪತಿ ಭಟ್ ರವರು ಅಧಿಕಾರಿಗಳು ಹಾಗೂ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರೊಂದಿಗೆ ಇಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಕ್ಕರ್ಣೆಯ ಸಭಾಭವನದಲ್ಲಿ ಪೂರ್ವಭಾವಿ ಸಭೆ ನಡೆಸಿ ಪೂರ್ವ ತಯಾರಿಯ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ವೀಣಾ ನಾಯ್ಕ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ, ಸಹಾಯಕ ಆಯುಕ್ತ ರಾಜು ಕೆ, ಬ್ರಹ್ಮಾವರದ ತಹಶೀಲ್ದಾರ್ ರಾಜಶೇಖರ್ ಮೂರ್ತಿ, ಪೋಲಿಸ್ ಉಪ ನಿರೀಕ್ಷಕ ಗುರುನಾಥ್ ಬಿ. ಹಾದಿಮನೆ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಕೊಕ್ಕರ್ಣೆ, ಕಳ್ತೂರು, ಆರೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು, ಪ್ರಮುಖರು, ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!