ಬ್ರಹ್ಮಾವರ: ಕ್ಷಯ ಮುಕ್ತ ಗ್ರಾಮದ ಅಭಿಯಾನದ ಉದ್ಘಾಟನಾ ಸಮಾರಂಭ ಹಾಂದಾಡಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ಹಂದಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ್ ಪೂಜಾರಿ ಅವರು ದೀಪ ಪ್ರಜ್ವಲನ ಗೊಳಿಸಿ ಉದ್ಘಾಟಿಸಿದರು. ಉಪಾಧ್ಯಕ್ಷೆ ಶೋಭಾ ಪೂಜಾರಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಸಮುದಾಯ ಆರೋಗ್ಯ ಕೇಂದ್ರ ಬ್ರಹ್ಮಾವರದ ಆಡಳಿತ ವೈದ್ಯಾಧಿಕಾರಿ ಡಾಕ್ಟರ್ ಅಜಿತ್ ಕುಮಾರ್ ಶೆಟ್ಟಿ ಕ್ಷಯ ರೋಗದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
ಕಾರ್ಯಕ್ರಮದ ಉದ್ದೇಶದ ಕುರಿತಾಗಿ ತಾಲೂಕು ಕ್ಷಯ ಘಟಕದ ಮೇಲ್ವಿಚಾರಕ ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ನಾಯಕ್, ಕಾರ್ಯಕ್ರಮದಲ್ಲಿ ಸಿ ಹೆಚ್ ಒ ಆತ್ಮಿಕಾ, ಪಿ ಹೆಚ್ ಸಿ ಒ ನಾಗರಾಜ್, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿಗಳ ಕಚೇರಿಯ ಆರೋಗ್ಯ ನಿರೀಕ್ಷಣ ಅಧಿಕಾರಿ ಜಗದೀಶ್ ರಾವ್ ಉಪಸ್ಥಿತರಿದ್ದರು. ಸಮುದಾಯ ಆರೋಗ್ಯ ಅಧಿಕಾರಿ ರೋಹನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಹಂದಾಡಿ ಗ್ರಾಮದ ಮನೆಮನೆಗೆ ಭೇಟಿ ಕೊಟ್ಟು ಕ್ಷಯ ರೋಗದ ಬಗ್ಗೆ ಮಾಹಿತಿ ಹಾಗೂ ಸಂಭಾವ್ಯ ಕ್ಷಯ ರೋಗಿಗಳ ಕಫ ಪರೀಕ್ಷೆ ಮಾಡಲಾಯಿತು. ಮೂರು ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ ತಂಡೋಪತಂಡವಾಗಿ ಗ್ರಾಮಗಳಿಗೆ ಭೇಟಿ ಕೊಟ್ಟು ಅಭಿಯಾನವನ್ನು ಯಶಸ್ವಿಗೊಳಿಸಲು ಕೋರಲಾಯಿತು.



































