ಹೆಬ್ರಿ : ಬೆಳ್ವೆಯಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
Published
2
ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ತಾಲ್ಲೂಕಿನ ಬೆಳ್ವೆಯಲ್ಲಿ ರವಿವಾರ ಸಂಜೆ ಜನವಸತಿ ಪ್ರದೇಶದಲ್ಲಿ ಕಾಳಿಂಗ ಸರ್ಪ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಕುಮಾರ್ ಎಂಬುವರ ಮನೆ ಬಳಿ ಕಾಣಿಸಿಕೊಂಡ ಕಾಳಿಂಗ ಸರ್ಪ ಮನೆಯವರಲ್ಲಿ ಭಯ ಹುಟ್ಟಿಸಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಲ್ಬಾಡಿಯ ಉರಗಪ್ರೇಮಿ ನಾಗರಾಜ್.ಎಸ್ ಕಾಳಿಂಗ ಸರ್ಪವನ್ನು ಹಿಡಿದು, ಸೋಮೇಶ್ವರ ಅಭಯಾರಣ್ಯದಲ್ಲಿ ಸುರಕ್ಷಿತವಾಗಿ ಬಿಟ್ಟರು.