Connect with us

Hi, what are you looking for?

Diksoochi News

ರಾಜ್ಯ

ಹರ್ಷ ಹತ್ಯೆ ಕೇಸ್: ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ

1

ಶಿವಮೊಗ್ಗ: ಭಜರಂಗ ದಳದ ಕಾರ್ಯಕರ್ತ ಹರ್ಷನ ಹತ್ಯೆ ಬಳಿಕ ನಗರದಲ್ಲಿ ಬಿಗುವಿನ ವಾತಾವರಣ ಮುಂದುವರಿದಿದೆ. ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಮೆಗ್ಗಾನ್ ಆಸ್ಪತ್ರೆಯಿಂದ ಹರ್ಷನ ಮನೆ ಬಳಿಗೆ ಮೃತದೇಹ ತರಲಾಗಿದ್ದು, ಅಂತಿಮ ಯಾತ್ರೆ ಮೆರವಣಿಗೆ ವೇಳೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದೆ‌. ಬೈಕ್ ಗಳಿಗೆ ಬೆಂಕಿ ಹಚ್ಚಿ, ಕಾರುಗಳ ಗಾಜನ್ನು ಪುಡಿಪುಡಿ ಮಾಡಲಾಗಿದೆ. ಅಂಗಡಿಗಳಿಗೆ, ಮನೆಗಳು ಕಲ್ಲು ತೂರಾಟ ನಡೆದಿದೆ. ಘಟನೆಯಿಂದ ಹಲವರು ಗಾಯಗೊಂಡಿದ್ದಾರೆ.

ಸೀಗೆಹಟ್ಟಿ, ಅಜಾದ್ ನಗರ, ಎನ್ ಟಿ ರಸ್ತೆಯಲ್ಲಿ ಪರಿಸ್ಥಿತಿ ಉದ್ನಿಗ್ನವಾಗಿದೆ.

Advertisement. Scroll to continue reading.

ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷನನ್ನು ನಿನ್ನೆ ರಾತ್ರಿ ಹತ್ಯೆ ಮಾಡಲಾಗಿದೆ. ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಹರ್ಷನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಹರ್ಷನನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪರಿಣಾಮ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!