ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಬೈಕ್ ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡಿರುವ ಘಟನೆ ಶಿವಪುರದ ಕೊಳಗುಡ್ಡೆ ಕ್ರಾಸ್ ಬಳಿ ನಡೆದಿದೆ. ಕೃಷ್ಣ ಬಿ.ಎಲ್.ಶೆಟ್ಟಿ ಗಾಯಗೊಡವರು. ಅವರು ತಮ್ಮ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ, ಉಡುಪಿಯಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದು ಕೃಷ್ಣ ಅವರಿಗೆ ಗಾಯಗಳಾಗಿವೆ.
ಪಿಕಪ್ ಚಾಲಕನ ಅತಿವೇಗ, ಅಜಾಗರೂಕತೆಯ ವಾಹನ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.