ಬೆಂಗಳೂರು: ನ್ಯಾಯಾಧೀಶರ ವಿರುದ್ಧ ಆಕ್ಷೇಪಾರ್ಹ ಟ್ವಿಟ್ಟರ್ ಪೋಸ್ಟ್ ಹಾಕಿದಂತ ಆರೋಪದಡಿ ಆ ದಿನಗಳು ಖ್ಯಾತಿಯ ನಟ ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಿ ಆದೇಶಿಸಲಾಗಿದೆ.
ನ್ಯಾಯಾಧೀಶರ ವಿರುದ್ಧ ನಿಂದನಾರ್ಹ ಟ್ವೀಟ್ ಮಾಡಿದ ವಿಚಾರವಾಗಿ ನಿನ್ನೆ ಶೇಷಾದ್ರಿಪುರಂ ಠಾಣೆಯ ಪೊಲೀಸರಿಂದ ನಟ ಚೇತನ್ ಅವರನ್ನು ಬಂಧಿಸಲಾಗಿತ್ತು.
ಇಂದು ನಟ ಚೇತನ್ ಆಕ್ಷೇಪಾರ್ಹ ಟ್ವೀಟ್ ಮಾಡಿರುವ ಸಂಬಂಧ 8ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಧೀಶರು, ನಟ ಚೇತನ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ನಟ ಚೇತನ್ ಗೆ 14 ದಿನಗಳ ನ್ಯಾಯಾಂಗ ಬಂಧನವಾಗಿದೆ.
Advertisement. Scroll to continue reading.