ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ: ಹಬ್ಬದ ಪ್ರಯುಕ್ತ ಬ್ಯಾನರ್ ಅಳವಡಿಸುತ್ತಿರುವ ಸಂದರ್ಭ ಆಕಸ್ಮಿಕವಾಗಿ ಫ್ಲೆಕ್ಸ್ ಗೆ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಸೌಕೂರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ .
ಸೌಕೂರು ನಿವಾಸಿ ಮೋಹನ ದೇವಾಡಿಗ ಅವರ ಪುತ್ರ ಪ್ರಶಾಂತ ದೇವಾಡಿಗ (26) ಸಾವನ್ನಪ್ಪಿದ ಯುವಕ. ಘಟನೆಯಲ್ಲಿ ಶ್ರೀಧರ ದೇವಾಡಿಗ(45) ಗಂಭೀರ ಗಾಯಗೊಂಡು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Advertisement. Scroll to continue reading.

ಶನಿವಾರ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ ನಡೆಯುವ ಪ್ರಯುಕ್ತ ಶುಕ್ರವಾರ ರಾತ್ರಿ ಹಬ್ಬಕ್ಕೆ ಶುಭಕೋರುವ ತಮ್ಮದೇ ಬ್ಯಾನರ್ ಅನ್ನು ಅಳವಡಿಸುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.


































